Posts

Showing posts from June, 2021

ಭಗವದ್ಗೀತೆ ಅಧ್ಯಾಯಗಳು

Image
 *ಭಗವದ್ಗೀತೆ ಓದಬೇಕು*  ಅಂತ ಬಹುತೇಕ ಹಿಂದೂಗಳಿಗೆ ಆಸೆ ಇರುತ್ತದೆ. ಭಗವದ್ಗೀತೆಯಲ್ಲಿ ಅಂಥದ್ದೇನಿದೆ ತಿಳ್ಕೋಬೇಕೆಂಬ ಕುತೂಹಲ. ಆದರೆ, 700 ಶ್ಲೋಕಗಳಿರುವ ಪುಸ್ತಕದ ಗಾತ್ರ ನೋಡಿ ಕೆಲವರು ಓದಲು ಹಿಂಜರಿದರೆ, ಮತ್ತೆ ಕೆಲವರು ಆ ಶ್ಲೋಕ ಗೀಕ ಎಲ್ಲ ಯಾರು ಓದ್ತಾರೆ ಅಂತ ಸುಮ್ನಾಗಿರ್ತಾರೆ. ನಿಮ್ಮಂಥವರಿಗಾಗಿಯೇ ಸರಳವಾಗಿ ಒಂದೊಂದು ಅಧ್ಯಾಯಗಳ ಸಾರವನ್ನೂ ಒಂದೆರಡು ಸಾಲಿನಲ್ಲಿ ಇಲ್ಲಿ ಕೊಡಲಾಗಿದೆ.  *ಅಧ್ಯಾಯ 1:*  ತಪ್ಪಾಗಿ ಯೋಚಿಸುವುದೇ ಜೀವನದ ಸಮಸ್ಯೆ ಅರ್ಜುನನ ದುಃಖ ಇಲ್ಲಿ ಮುಖ್ಯ ವಿಷಯ. ಯುದ್ಧಕ್ಕಾಗಿ ಬಂಧುಗಳನ್ನೇ ಕೊಲ್ಲಬೇಕಾದ ದುಗುಡ ಹಾಗೂ ಖಿನ್ನತೆ. ಧರ್ಮ ಹಾಳುಗೆಡವಿದ್ದನ್ನು ನೋಡುವುದಕ್ಕಿಂತ ಅವರೆಲ್ಲ ತನ್ನ ಬಂಧುಗಳೇ. ಅವರನ್ನು ಹೇಗೆ ಕೊಲ್ಲುವುದು ಎಂದು ಅರ್ಜುನ ಯೋಚಿಸುತ್ತಿರುತ್ತಾನೆ. ಆದರೆ, ಈ ಯೋಚನೆ ತಪ್ಪು. ಧರ್ಮವು ಈ ಭವಬಂಧನಗಳಿಗಿಂತ ಹೆಚ್ಚು. ತಪ್ಪಾಗಿ ಯೋಚಿಸುವುದರಿಂದ ತಪ್ಪಾದ ತೀರ್ಪು ಹೊರಬರುತ್ತದೆ ಎಂಬುದನ್ನು ಶ್ರೀಕೃಷ್ಣ ವಿವರಿಸುತ್ತಾನೆ. ಆದರೆ, ಅರ್ಜುನನಿಗೆ ಸಮಧಾನವಾಗುವುದಿಲ್ಲ. ಆತ ಗೊಂದಲ ಹಾಗೂ ದುಃಖದಿಂದ ಕುಳಿತುಕೊಳ್ಳುತ್ತಾನೆ.  *ಅಧ್ಯಾಯ 2:* ಸರಿಯಾದ ಜ್ಞಾನವೇ ಎಲ್ಲ ಸಮಸ್ಯೆಗಳಿಗೆ ಅಂತಿಮ ಪರಿಹಾರ ಕೃಷ್ಣನು ಅರ್ಜುನನಿಗೆ ಅವನೆಲ್ಲ ದುಃಖದುಮ್ಮಾನ, ಸಮಸ್ಯೆಗಳಿಗೆ ಅಜ್ಞಾನವೇ ಕಾರಣ ಎಂಬುದನ್ನು ತಿಳಿಸುತ್ತಾನೆ. ಭೀಷ್ಮನಿಂದ ಹಿಡಿದು ಯಾರೊಬ್ಬರ ಆತ್ಮಗಳನ್ನೂ ನಾಶಪಡಿಸಲಾಗುವುದಿ...